ಬೆಂಗಳೂರು: ಲೋಕಸಭಾ ಚುನಾವಣೆಯ 2ನೇ ಹಂತ ಹಾಗೂ ರಾಜ್ಯದ ಮೊದಲನೇ ಹಂತದ ಮತದಾನ ಏಪ್ರಿಲ್ 26 ರಂದು ಶುಕ್ರವಾರ ನಡೆಯಲಿದೆ. ಮತದಾರರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೊ ರೈಲು ಸೇವೆ ವಿಸ್ತರಣೆಯಾಗಿದೆ.
ಟರ್ಮಿನಲ್‌ಗಳಾದ ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ ಹಾಗೂ ವೈಟ್‌ಫಿಲ್ಡ್‌ನಿಂದ ಶುಕ್ರವಾರ ಕೊನೆಯ ರೈಲು ರಾತ್ರಿ 11:55ಕ್ಕೆ ಹೊರಡಲಿದೆ (ಪ್ರತಿದಿನ 11:15) ಎಂದು ಬಿಎಂಆರ್‌ಸಿಎಲ್ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಮೆಜೆಸ್ಟಿಕ್ (ನಾಡಪ್ರಭು ಕೆಂಪೇಗೌಡ ನಿಲ್ದಾಣ) ನಿಂದ ಕೊನೆಯ ರೈಲುಗಳು ನಾಲ್ಕೂ ಕಡೆಗೆ ಮಧ್ಯರಾತ್ರಿ 12:35ಕ್ಕೆ ಹೊರಡಲಿವೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಎರಡನೇ ಹಂತದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಲಿದೆ.