ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ಪ್ರಯೋಗಿಕ ಜಾರಿ: ಗಡ್ಕರಿ

ಮೈಕ್ರೊಸಾಫ್ಟ್ ಡಿಸೈನರ್ ಎಐ ಚಿತ್ರ

ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ನೀಡಲು ಸರ್ಕಾರವು ಯೋಜನೆ ರೂಪಿಸಿದ್ದು, ಈಗಾಗಲೇ ಚಂಡೀಗಢ ಮತ್ತು ಅಸ್ಸಾಂನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿ ಗೊಳಿಸಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಆಯುಷ್ಮಾನ್‌ ಭಾರತ್‌ ಪ್ರಧಾನ ಮಂತ್ರಿ–ಜನಾರೋಗ್ಯ ಯೋಜನೆಯಡಿ ಸೇರ್ಪಡೆ ಯಾಗಿರುವ ಆಸ್ಪತ್ರೆಗಳಲ್ಲಿ ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲಿಸಲಾಗುತ್ತದೆ. ಅವಘಡ ಸಂಭವಿಸಿದ ದಿನದಿಂದ ಏಳು ದಿನಗಳವರೆಗೆ ಗರಿಷ್ಠ ₹1.5 ಲಕ್ಷದವರೆಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಭಾರತೀಯ ಆರೋಗ್ಯ ಪ್ರಾಧಿಕಾರದ ಸಹ ಭಾಗಿತ್ವದಡಿ ವಾಹನ ಅಪಘಾತದಿಂದ ಗಾಯಗೊಂಡವರಿಗೆ ಈ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಮೋಟರ್‌ ವಾಹನಗಳ ಕಾಯ್ದೆ 1988ರ ಅಡಿ ರಚಿಸಿರುವ ಮೋಟರ್‌ ವಾಹನ ಅಪಘಾತ ನಿಧಿಯಡಿ ಚಿಕಿತ್ಸಾ ವೆಚ್ಚ ಭರಿಸಲಾಗುತ್ತದೆ ಎಂದು ಹೇಳಿದ್ದಾರೆ.

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ